ಅಂತಿಮ ಪಂದ್ಯದಲ್ಲಿ ಸೋತ ಆಫ್ರಿಕಾ: ಟೀಂ ಇಂಡಿಯಾ ಮಡಿಲಿಗೆ ಏಕದಿನ ಸೀರಿಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸೌತ್ ಆಫ್ರಿಕಾ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ.

ಸೌತ್ ಆಫ್ರಿಕಾ ತಂಡವನ್ನು 99 ರನ್‌ಗೆ ಆಲೌಟ್ ಮಾಡಿದ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.

100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು.

ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು. ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು.

ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

99 ರನ್‌ಗೆ ಆಲೌಟ್
ಸೌತ್ ಆಫ್ರಿಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲವಾಯಿತು. ಟೀಂ ಇಂಡಿಯಾ ಬೌಲರ್‌ಗಳು ಸೌತ್ ಆಫ್ರಿಕಾ ತಂಡಕ್ಕೆ ಯಾವುದೇ ಅವಕಾಶ ನೀಡಲಿಲ್ಲ. ಜನ್ನೆಮ್ಯಾನ್ ಮಲನ್ 15 ರನ್ ಸಿಡಿಸಿ ಔಟಾದರು. ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಹೆಂಡ್ರಿಕಸ್ 3 ರನ್ ಸಿಡಿಸಿ ಔಟಾದರು. ಆ್ಯಡಿನ್ ಮಕ್ರಮ್ 9, ನಾಯಕ ಡೇವಿಡ್ ಮಿಲ್ಲರ್ 7, ಫೆಲುಕವಾಯೋ 5 , ಮಾರ್ಕೋ ಜಾನ್ಸೆನ್ 14, ಹೆನ್ರಿಚ್ ಕಾಲ್ಸೆನ್ 34 ರನ್, ಜಾರ್ನ್ ಫಾರ್ಟಿನ್ 1, ಅನ್ರಿಚ್ ನೋರ್ಜೆ ಡಕೌಟ್ ಆದರು. ಇದರೊಂದಿಗೆ ಸೌತ್ ಆಫ್ರಿಕಾ 99 ರನ್ ಸಿಡಿಸಿ ಔಟಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!