ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಹಿಡಿತ ಸಾಧಿಸಿದೆ. ಟಾಸ್ ಗೆದ್ದ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು.
ಬ್ಯಾಟಿಂಗ್ ಆರಂಭಿಸಿದ ಹರಿಣ ಪಡೆ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಐಡೆನ್ ಮಾರ್ಕ್ರಮ್ ( 61) ಸಿಡಿಸಿದ ಅರ್ಧಶತಕದ ನೆರವಿನಿಂದ ಪ್ರವಾಸಿ ತಂಡ 100ರ ಗಡಿ ದಾಟಲು ಸಾಧ್ಯವಾಯಿತು. 20 ಓವರ್ಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 117 ರನ್ಗಳಿಸಿತು.
ಭಾರತದ ಪರ ಬೌಲಿಂಗ್ ನಲ್ಲಿ ಅರ್ಶ್ ದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿದ್ದು, ಸರಣಿ ಮೇಲೆ ಹಿಡಿತ ಸಾಧಿಸಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಪ್ರಮುಖವಾಗಿವೆ.

