ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 74 ರನ್ಗಳಿಗೆ ಆಲೌಟ್ ಆಗಿದ್ದು, ಈ ಮೂಲಕ ಟೀಂ ಇಂಡಿಯಾ 101 ರನ್ಗಳ ಭಾರಿ ಅಂತರದ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿತು. ತಂಡದ ಯಾವ ಬ್ಯಾಟ್ಸ್ಮನ್ಗೂ ಟೀಂ ಇಂಡಿಯಾ ಬೌಲಿಂಗ್ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಆಫ್ರಿಕಾ ಪರ ಡೆವಾಲ್ಡ್ ಬ್ರೆವಿಸ್ 22 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ತಂಡದ ಉಳಿದ ಏಳು ಆಟಗಾರರು 10 ರನ್ ಗಳಿಸಲು ಸಹ ವಿಫಲರಾದರು.
ಭಾರತದ ಪರ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.

