Saturday, August 13, 2022

Latest Posts

ಯುಕೆ ಸೋಂಕು ಬಳಿಕ ರಾಜ್ಯದ ಜನತೆಗೆ ಆತಂಕ ಮೂಡಿಸಿದ ಆಫ್ರಿಕಾ ವೈರಸ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಯುಕೆ ನಂತರ ಇದೀಗ ದಕ್ಷಿಣ ಆಫ್ರಿಕಾ ವೈರಸ್ ಕೂಡ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
ಬೆಂಗಳೂರು ಏರ್‌ಪೋರ್ಟ್ ಬಳಿ ವ್ಯಕ್ತಿಯನ್ನು ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಬಳಿಕ ಸ್ಯಾಂಪಲ್ ಅನ್ನು ನಿಮ್ಹಾನ್ಸ್​ಗೆ ಕಳುಹಿಸಲಾಗಿತ್ತು. ಇವರಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್​ನಲ್ಲಿ ಸೌತ್ ಆಫ್ರಿಕಾ ವೈರಸ್ ಪತ್ತೆಯಾಗಿದೆ.
ಸೋಂಕಿತ ವ್ಯಕ್ತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಸದ್ಯ ಎಸಿಮ್ಟಮ್ಯಾಟಿಕ್ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಅಂತ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು ಒಂದೇ ದಿನ 760 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,56,801 ಕ್ಕೆ ಏರಿಕೆ ಆಗಿದೆ.6 ಸೋಂಕಿತರು ಮೃತರಾಗಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ 12,379ಕ್ಕೆ ಏರಿದೆ.‌ 331 ಮಂದಿ ಗುಣಮುಖರಾಗಿದ್ದು, ಒಟ್ಟು 9,36,947 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಸದ್ಯ ಸಕ್ರಿಯ ಪ್ರಕರಣಗಳು 7,456 ಇದ್ದು 115 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss