spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಫ್ರಿಕನ್ ಪ್ರಜೆ ಸಾವು ಪ್ರಕರಣ: ಕೇಸ್ ಸಿಐಡಿ ತನಿಖೆಗೆ ವರ್ಗಾವಣೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ. ಎನ್‌ಹೆಚ್‌ಆರ್‌ಸಿ, ಸಿಐಡಿಯಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲಿದೆ.
ಇನ್ನು ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದ್ದು,ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಸಾವನ್ನಪ್ಪಿದ ಕಾರಣ ಠಾಣೆ ಮುಂದೆ ಧರಣಿ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳು ಪೊಲೀಸರ ಜತೆ ವಾಗ್ವಾದ, ಹಲ್ಲೆಗೆ ಯತ್ನಿಸಿದ ಕಾರಣ ಲಾಠಿಚಾರ್ಜ್ ನಡೆಸಲಾಗಿದೆ.
ಆಫ್ರಿಕನ್​​​ ಪ್ರಜೆ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಆಫ್ರಿಕನ್ ಪ್ರಜೆ ಸಾವನ್ನಪ್ಪಿದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಮಾತಾಡಿದ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌, ಪೊಲೀಸರ ಮೇಲೆ ಹಲ್ಲೆ ನಡೆಸಿದ ಆಫ್ರಿಕನ್​​​ ಪ್ರಜೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಾಗುವುದು ಎಂದು ಹೇಳಿದ್ದಾರೆ.
ಪೊಲೀಸರು ಮತ್ತು ಆಫ್ರಿಕನ್​​ ಪ್ರಜೆಗಳ ನಡುವೆ ಮಿಸ್​​ ಕಮ್ಯುನಿಕೇಷನ್​ ಆಗಿದೆ. ಅಡಿಷನಲ್​​ ಸಿಪಿ ಸೌಮೇಂದು ಮುಖರ್ಜಿ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಬಗ್ಗೆ ನಾವು ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲಿದ್ದೇವೆ. ಈ ಬಗ್ಗೆ ಸಿಐಡಿಗೂ ಮಾಹಿತಿ ರವಾನಿಸಿದ್ದೇವೆ ಎಂದರು.
ಪೊಲೀಸರ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಾಗುವುದು. ಆಫ್ರಿಕನ್​​ ಪ್ರಜೆ ಬೇರೆ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ. ಈಗ ಪರಿಸ್ಥಿತಿ ತಿಳಿಗೊಳಿಸಲಾಗುತ್ತಿದೆ. ಡಿಸಿಪಿ ಧರ್ಮೇಂದ್ರ ಕೂಡ ಸ್ಥಳದಲ್ಲಿದ್ದಾರೆ. ದೊಡ್ಡ ಮಟ್ಟದ ಗಲಾಟೆ ಏನೂ ಆಗಿಲ್ಲ. ನಾನು ಅದರ‌ ಬಗ್ಗೆ ಮಾಹಿತಿ ಪಡೆದುಕೊಳ್ತಿದ್ದೇನೆ ಎಂದು ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss