ಅಯೋಧ್ಯೆಗೆ ಭೇಟಿ ನೀಡಿ ರಾಮಲಲಾನ ದರುಶನ ಪಡೆದ ಆಫ್ರಿಕಾ ಕ್ರಿಕೆಟಿಗ ಕೇಶವ್​ ಮಹಾರಾಜ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಯೋಧ್ಯೆಯ ಭವ್ಯ ರಾಮಮಂದಿರದ (Ram Mandir) ಲೋಕಾರ್ಪಣೆ ಸಂದರ್ಭದಲ್ಲಿ ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದಿದ್ದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಕೇಶವ್​ ಮಹಾರಾಜ್(Keshav Maharaj) ಅವರು ರಾಮಮಂದಿರಕ್ಕೆ(Keshav Maharaj at Ram Mandir) ಭೇಟಿ ನೀಡಿ ರಾಮಲಲಾನ ದರುಶನ ಪಡೆದಿದ್ದಾರೆ .

ಐಪಿಎಲ್(IPL 2024)​ ಭಾಗವಾಗಿ ಭಾರತಕ್ಕೆ ಬಂದಿರುವ ಕೇಶವ್​ ಮಹರಾಜ್ ಭಾರತಕ್ಕೆ ಬಂದೊಡೆನೆ ನೇರವಾಗಿ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೊವನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಜೈ ಶ್ರೀ ರಾಮ್. ಎಲ್ಲರಿಗು ಒಳಿತು ಮಾಡಲಿ’ ಎಂದು ಬರೆದುಕೊಂಡಿದ್ದಾರೆ.

ಮಹರಾಜ್ ಅವರು ಮುಂಬರುವ ಟಿ20 ವಿಶ್ವಕಪ್​ ಭಾಗವಾಗಿ ಐಪಿಎಲ್​ನಲ್ಲಿ ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಶಿಬಿರಕ್ಕೆ ಸೇರಿದ್ದಾರೆ.

ಆಂಜನೇಯನ ಪರಮ ಭಕ್ತನಾಗಿರುವ ಕೇಶವ್​ ಮಹಾರಾಜ್ ಶ್ರೀರಾಮ ಮಂದಿರ ಲೋಕಾರ್ಪಣೆಯ ವೇಳೆ ಮಂದಿರಕ್ಕೆ ಭೇಟಿ ನೀಡುವುದು ನನ್ನ ಈ ವರ್ಷದ ಪ್ರಮುಖ ಗುರಿ ಎಂದಿದ್ದರು. ಕೇಶವ ಮಹಾರಾಜ್‌ ಅವರು ಬ್ಯಾಟಿಂಗ್​ ನಡೆಸಲು ಮೈದಾನಕ್ಕೆ ಬಂದಾಗಲೆಲ್ಲ ‘ರಾಮ್ ಸಿಯಾ ರಾಮ್’ ಹಾಡನ್ನು ಸ್ಟೇಡಿಯಂನಲ್ಲಿ ಜೋರಾಗಿ ಹಾಕಲಾಗುತ್ತದೆ. ಈ ಹಾಡನ್ನು ಕೇಳಿದರೆ ತನಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಹಿಂದೊಮ್ಮೆ ಸಂದರ್ಶನದಲ್ಲಿ ಅವರು ಹೇಳಿದ್ದರು.

ಕೇಶವ್​ ಮಹಾರಾಜ್​ ಮೂಲತಃ ಭಾರತೀಯರಾಗಿದ್ದು, ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಆದರೆ ಅವರು ಭಾರತಕ್ಕೆ ಬಂದಾಗಲೆಲ್ಲಾ ಕುಟುಂಬ ಸಮೇತರಾಗಿ ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಮಹರಾಜ್​ ಕೇರಳದ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!