ಮಂಗಳೂರಿಗೆ ಆಫ್ರಿಕನ್ ಹಂದಿ ಜ್ವರ ‘ಬಿಸಿ’: ಜಿಲ್ಲಾಡಳಿತದಿಂದ ಕಟ್ಟಿನಿಟ್ಟಿನ ಕ್ರಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇತ್ತೀಚೆಗಷ್ಟೇ ಕೊಡಗು, ಕಾಸರ ಗೋಡು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಆಫ್ರಿಕನ್ ಹಂದಿ ಜ್ವರ ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದಲ್ಲಿ ಪತ್ತೆಯಾಗು ವ ಮೂಲಕ ಇನ್ನಷ್ಟು ಆತಂಕ ಹೆಚ್ಚಿಸಿದೆ.
ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರ ವೊಂದರಲ್ಲಿರುವ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ಖಚಿತಗೊಂಡಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅಲರ್ಟ್ ಆಗಿರುವ ಜಿಲ್ಲಾಡಳಿತ ತುರ್ತು ಕ್ರಮಕ್ಕೆ ಮುಂದಾಗಿದೆ.

ಅಗತ್ಯ ಕ್ರಮ ಕೈಗೊಳ್ಳಲಾಗಿದೆ

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಹಂದಿ ಪಾಲಕರು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಯಾವುದೇ ಸಂದೇಹವಿದ್ದರೂ ಪಶುವೈದ್ಯರನ್ನು ಸಂರ್ಕಿಸಬೇಕು ಎಂದು ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಸೂಚಿಸಿದ್ದಾರೆ.

ಎಚ್ಚರಿಕೆ ಕ್ರಮ ಪಾಲಿಸಿ

ಆಫ್ರಿಕನ್ ಹಂದಿ ಜ್ವರ ಅಪಾಯಕಾರಿಯಾಗಿದ್ದರೂ, ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡು ವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯ ದಲ್ಲಿರುವ ಹಂದಿ ಸಾಕಾಣಿಕೆದಾರರು, ಇತರರು ಸಧ್ಯ ಈ ರೋಗ ಪೀಡಿತ ವಲಯಕ್ಕೆ ಭೇಟಿ ನೀಡಬಾರದು ಎಂದು ಅವರು, ಯಾವುದೇ ಕಾರಣಕ್ಕೂ ಅಪರಿಚಿತ ವ್ಯಕ್ತಿಗಳಿಂದ ಹಂದಿ ಮರಿಗಳನ್ನು, ಹಂದಿ ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡಬೇಕು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿಯವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!