Friday, August 29, 2025

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢ: 100 ಹಂದಿಗಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಹಂದಿ ಫಾರ್ಮ್​ನಲ್ಲಿ ಆಗಸ್ಟ್​ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು.

ಹಂದಿಗಳ ರಕ್ತದ ಸ್ಯಾಂಪಲ್ ಅನ್ನು ಭೋಪಾಲ್​ನ ರಾಷ್ಟ್ರೀಯ ಲ್ಯಾಬ್​ಗೆ ಕಳುಹಿಸಲಾಗಿತ್ತು. ಲ್ಯಾಬ್​ ವರದಿಯಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢಪಟ್ಟಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಫಾರಂನಲ್ಲಿರುವ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ