ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯನ್ನು ದೇಶಾದ್ಯಂತ ಜಾತಿ-ಧರ್ಮ ಮೀರಿ ಖಂಡಿಸಲಾಗುತ್ತಿದೆ.
ಇದರ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ, ಈ ಘಟನೆಯ ಕುರಿತಂತೆ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ಮಾಡಲು ಹೋಗಿ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಪಹಲ್ಗಾಮ್ ಭಯೋತ್ಪಾದಕರ ದಾಳಿಗೆ ಭಾರತದ ಸೇನೆ ಕಾರಣ ಎಂದು ವಿಚಿತ್ರ ಆರೋಪ ಮಾಡಿದ್ದಾರೆ
ಇದೀಗ ಅಫ್ರಿದಿ ಮಾತಿಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಅಫ್ರಿದಿಯನ್ನು ಜೋಕರ್ ಎಂದು ಕರೆದಿದ್ದಾರೆ. ಅಫ್ರಿದಿಯ ಅವರ ಹೇಳಿಕೆ ಬಗ್ಗೆ ನೀವೇನಂತೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಒವೈಸಿ, ಅವನೊಬ್ಬ ಜೋಕರ್ ಎಂದು ಕರೆದಿದ್ದಾರೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಬಿಲಾವಲ್ ಭುಟ್ಟೋ ಅವರಿಗೂ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ. ನಿಮ್ಮ ತಾಯಿ(ಬೆನಜಿರ್ ಭುಟ್ಟೋ) ಅವರ ಮೇಲೆ ದಾಳಿಯಾದಾಗ ನೀವು ಅದನ್ನು ಆತಂಕವಾದ ಎಂದು ಕರೆಯುತ್ತೀರಾ. ಹಾಗಿದ್ರೆ ನಮ್ಮ ತಾಯಿ ಹಾಗೂ ಸಹೋದರಿಯರ ಮೇಲೆ ದಾಳಿಯಾದ್ರೆ ಅದು ಆತಂಕವಾದ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.