Thursday, June 1, 2023

Latest Posts

25 ವರ್ಷಗಳ ಬಳಿಕ ಬಾಲಿವುಡ್ ಗೆ ನಟಿ ಜ್ಯೋತಿಕಾ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಭಾರತದ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ಬರೋಬ್ಬರಿ 25 ವರ್ಷಗಳ ಬಳಿಕ ಬಾಲಿವುಡ್ ಗೆ ಮರಳಿದ್ದಾರೆ.

ಈ ಹಿಂದೆ ಹಿಂದಿ, ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ, ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ, ಇದೀಗ ಬಾಲಿವುಡ್ (Bollywood) ಸಿನಿಮಾದ ಮೂಲಕ ಮತ್ತೆ ಎಂಟ್ರಿ ಪಡೆದಿದ್ದಾರೆ .

ಅಜಯ್ ದೇವಗನ್ (Ajay Devgn) ನಟನೆಯ ಸಿನಿಮಾ ಒಪ್ಪಿಕೊಂಡಿದ್ದು, ಈ ಚಿತ್ರಕ್ಕೆ ಜ್ಯೋತಿಕಾ ನಾಯಕಿ. ಇದೊಂದು ಹಾರರ್ ಚಿತ್ರವಾಗಿದ್ದು, ಆರ್. ಮಧುವನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಚಿತ್ರತಂಡದಿಂದಲೇ ಅಧಿಕೃತ ಮಾಹಿತಿಯಾಗಿದ್ದು, ಚಿತ್ರಕ್ಕೆ ಇನ್ನೂ ಟೈಟಲ್ ಇಟ್ಟಿಲ್ಲ.

ಜ್ಯೋತಿಕಾ ಮತ್ತು ಪತಿ ಕಂ ನಟ ಸೂರ್ಯ ತಮಿಳಿನಲ್ಲಿ ಅತ್ಯುತ್ತಮ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಜ್ಯೋತಿಕಾ ಬಹುತೇಕ ನಿರ್ಮಾಣದಲ್ಲೇ ಬ್ಯುಸಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!