ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸಂಪುಟ ಸಚಿವರಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ಸುಮಾರು 25 ವರ್ಷಗಳ ನಂತರ ಜೆಡಿಎಸ್ ಕೇಂದ್ರದ ಆಡಳಿತವನ್ನು ಕೈಗೆತ್ತಿಕೊಂಡಿದೆ.
ದೇವೇಗೌಡರು 1996ರಿಂದ 1997ರವರೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಪ್ರಧಾನಿಯಾಗಿದ್ದರು. ಅದೇ ಸಮಯದಲ್ಲಿ, ಅವರು ಗೃಹ ಖಾತೆಯನ್ನು ಸ್ವಲ್ಪ ಸಮಯದವರೆಗೆ ತಮ್ಮಲ್ಲಿಯೇ ಇಟ್ಟುಕೊಂಡಿದ್ದರು.
ದೇವೇಗೌಡರು ಪ್ರಧಾನಿಯಾಗಿದ್ದಾಗ ಜೆಡಿಎಸ್ ನಾಯಕರಾಗಿದ್ದ ಎಸ್.ಆರ್. ಬೊಮ್ಮಾಯಿ ಹಾಗೂ ಸಿ.ಎಂ.ಇಬ್ರಾಹಿಂ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು. ಇದಾದ ಬಳಿಕ ಜೆಡಿಎಸ್ ಸಂಸದರಾಗಿ ಆಯ್ಕೆಯಾಗಿದ್ದರೂ ಯಾರಿಗೂ ಸಚಿವ ಸ್ಥಾನ ನೀಡಿಲ್ಲ.
ಎನ್ ಡಿಎ ಸರ್ಕಾರದಲ್ಲಿ ಜೆಡಿಎಸ್ ಪ್ರಮುಖ ಮಿತ್ರ ಪಕ್ಷವಾಗಿರುವುದರಿಂದ ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದಲ್ಲದೆ, ಕುಮಾರಸ್ವಾಮಿ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ.