ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಗಿಲ್ ಯುದ್ಧದ 25 ವರ್ಷಗಳ ನಂತರ, ಪಾಕಿಸ್ತಾನವು ಭಾರತದೊಂದಿಗಿನ ಮಾರಣಾಂತಿಕ ಸಂಘರ್ಷದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದೆ. ಈ ಬಗ್ಗೆ ಸ್ವತಃ ಸೇನಾ ಅಧಿಕಾರಿಗಳು ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ.
ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನ ಸೇನಾ ಪ್ರಧಾನ ಕಛೇರಿಯಲ್ಲಿ ನಡೆದ ರಕ್ಷಣಾ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ಪಾಕ್ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್ ಮಾತನಾಡಿದರು. 1948, 1965 ಮತ್ತು 1971 ರ ಯುದ್ಧಗಳು, ಕಾರ್ಗಿಲ್ ಯುದ್ಧ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಯಾಚಿನ್ ಸಂಘರ್ಷದಲ್ಲಿ ಸಾವಿರಾರು ಸೈನಿಕರು ಪ್ರಾಣ ತ್ಯಾಗ ಮಾಡಬೇಕಾಯಿತು ಎಂದು ಅವರು ಹೇಳಿದರು.
ಇದರೊಂದಿಗೆ ಪಾಕಿಸ್ತಾನ ಸೇನೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದೆ. ಈ ವಿಷಯದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಸದ್ದು ಮಾಡುತ್ತಿದೆ.
ಅನ್ಯತಾ ಗತಿರ್ನಾಸ್ತಿ!