ಬಿಡಿಎ ಅಧ್ಯಕ್ಷರಾದ ಬೆನ್ನಲ್ಲೇ ಎನ್.ಎ. ಹ್ಯಾರಿಸ್ ಗೆ ಶುರುವಾಗಿದೆ ಶಾಸಕ ಸ್ಥಾನ ಅನರ್ಹಗೊಳ್ಳುವ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರು ಅಧಿಕಾರ ಸ್ವೀಕರಿಸಿದ್ದು, ಇದರ ಬೆನ್ನಲ್ಲೇ ಅವರ ಶಾಸಕ ಸ್ಥಾನವೇ ಅನರ್ಹಗೊಳ್ಳುವ ಭೀತಿ ಶುರುವಾಗಿದೆ.

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಪರಾಜಿತ ಅಭ್ಯರ್ಥಿ ಶಿವಕುಮಾರ್ ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿ ಗೆಲುವು ಸಾಧಿಸಿರುವ ಹ್ಯಾರೀಸ್ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ಚುನಾವಣಾ ತಕರಾರು ಅರ್ಜಿಯನ್ನು ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿದ್ದರಿಂದ ಚುನಾವಣೆ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಹ್ಯಾರಿಸ್ ಅನರ್ಹ ಮಾಡುವಂತೆ ಪರಾಜಿತ ಅಭ್ಯರ್ಥಿ ಮನವಿ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಸಚಿವ ಸ್ಥಾನ ಸಿಗದ ಎಲ್ಲ ಹಿರಿಯ ನಾಯಕರಿಗೆ ನಿಗಮ ಮಂಡಳಿಗಳನ್ನು ಹಂಚುವ ಮೂಲಕ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ನೀಡಲಾಗಿದೆ. ಆದರೆ, ಈಗ ಸುಳ್ಳು ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿರುವುದು ಸಾಬೀತಾದಲ್ಲಿ ತಕ್ಷಣವೇ ಹ್ಯಾರಿಸ್‌ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವ ಸಾಧ್ಯತೆಯೂ ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!