ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ಅವರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ನಂತರ ಕೊಲೆ ಆರೋಪಿ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ದರ್ಶನ್ ಅವರನ್ನು ಇಂದು ಭೇಟಿಯಾಗಲು ಅವಕಾಶ ನೀಡುವಂತೆ ಅವರ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಸೋಮವಾರ ದರ್ಶನ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇಂದು ಬಳ್ಳಾರಿ ಜೈಲಿಗೆ ವಿಜಯಲಕ್ಷ್ಮಿ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.