ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಸರಣಿ ಬಾಣಂತಿಯರ ಸಾವಿನ ಬೆನ್ನಲ್ಲೇ ಬೆಳಗಾವಿಯಲ್ಲೂ ಬಾಣಂತಿಯರು ಮತ್ತು ಶಿಶುಗಳ ಸಾವು ವರದಿಯಾಗಿತ್ತು. ಈಗ ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು ವರದಿಯಾಗಿದೆ.
ರಾಯಚೂರಿನಲ್ಲಿ ಒಂದೇ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್‌ನಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.
ಮೃತರನ್ನು ಚಂದ್ರಕಲಾ (26), ರೇಣುಕಮ್ಮ (32), ಮೌಸಮಿ ಮಂಡಲ್ (22) ಮತ್ತು ಚನ್ನಮ್ಮ ಎಂದು ಗುರುತಿಸಲಾಗಿದೆ. ಅಕ್ಟೋಬರ್‌ನಲ್ಲಿ ತಾಲೂಕು ಆಸ್ಪತ್ರೆಯಲ್ಲಿ ನಡೆದ 300 ಹೆರಿಗೆಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಪೈಕಿ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.