ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ದೊರಕಿದ ಪ್ರಕರಣದ ಬಗ್ಗೆ ಇನ್ನೂ ತನಿಖೆಗಳು ನಡೆಯುತ್ತಿದ್ದಂತೆಯೇ ತುಮಕೂರಿನಲ್ಲಿಯೂ ಅಸ್ಥಿ ಪಂಜರವೊಂದು ಪತ್ತೆಯಾಗಿದೆ.
ಕುಣಿಗಲ್‌ನ ಕಿತ್ತಾನಮಂಗಲ ಕೆರೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಇದರ ಜೊತೆಗೆ ಕಾಲ್ಗೆಜ್ಜೆ, ಬಳೆ ಹಾಗೂ ನೈಟಿ ಪತ್ತೆಯಾಗಿದೆ. ಕೆಲ ತಿಂಗಳ ಹಿಂದೆ ಕಲ್ಲಿಪಾಳ್ಯ ಗ್ರಾಮದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಇದು ಅವರ ಕಳೇಬರವಾ ಎಂಬ ಪ್ರಶ್ನೆ ಮೂಡಿದೆ.
ಪೊಲೀಸರು ತನಿಖೆ ಆರಂಭಿಸಿದ್ದಾರೆ.