ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಶನ್ ಅನುಮತಿ ಸಂಕಷ್ಟ ಬಳಿಕ ಇದೀಗ ಸಚಿವ ಎಂ.ಬಿ ಪಾಟೀಲ್ ಅವರಿಗೆ ಸಂಕಷ್ಟ ತಗುಲಿಕೊಂಡಿದೆ. ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ.
ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.
ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದಾರೆ.
ಇತ್ತೀಚೆಗೆ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಬವರು ಮನವಿ ಮಾಡಿದ್ದರು. ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು.