ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅಮೆರಿಕ ಹಾಗೂ ಈಜಿಪ್ಟ್ ಪ್ರವಾಸ ಮುಗಿಸಿ ಇದೀಗ ಭಾರತಕ್ಕೆ ವಾಪಾಸಾಗಿದ್ದಾರೆ. ಬಂದೊಡನೆ ಕಾರ್ಯಪ್ರವೃತ್ತರಾಗಿರುವ ಪ್ರಧಾನಿ ಬಿಜೆಪಿ ನಾಯಕರಿಗೆ ಕೆಲಸ ಹೇಗೆ ನಡೆಯುತ್ತಿದೆ, ದೇಶದಲ್ಲಿ ಏನೆಲ್ಲಾ ಆಗಿದೆ ಎನ್ನುವ ವಿಚಾರಗಳನ್ನು ಕೇಳಿ ತಿಳಿದುಕೊಂಡಿದ್ದಾರೆ.
ಇಂದು ಬೆಳಗಿನ ಜಾವ ದೆಹಲಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ್, ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ವಿಮಾನ ನಿಲ್ದಾಣಕ್ಕೆ ಬಂದು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.