ಅಧಿಕಾರದ ಗದ್ದುಗೆ ಏರಿದ ಬೆನ್ನಲ್ಲೇ ‘ಮಹಾ’ ಜನತೆಗೆ ಗುಡ್ ನ್ಯೂಸ್ ಘೋಷಿಸಿದ ಸಿಎಂ ಶಿಂದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಬೆನ್ನಲ್ಲೇ ಏಕನಾಥ್ ಶಿಂದೆ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್​​ ದರ ಕಡಿತಗೊಳಿಸಿ ಆದೇಶ ಹೊರಡಿಸುವುದಾಗಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಈ ಘೋಷಣೆ ಮಾಡಿರುವ ಅವರು, ಇಂಧನದ ಮೇಲಿನ ವ್ಯಾಟ್​ ಇಳಿಕೆ ಮಾಡಲಾಗುವುದು ಎಂದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮಹತ್ವದ ಕೇಂದ್ರ ಸರ್ಕಾರ ತೈಲದ ಮೇಲೆ ವ್ಯಾಟ್ ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಇಂಧನ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಮಾಡಿರಲಿಲ್ಲ. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಏಕನಾಥ್ ಶಿಂದೆ ನೇತೃತ್ವದ ಹೊಸ ಸರ್ಕಾರ ಈ ಘೋಷಣೆ ಮಾಡಿದೆ.

ವಿಶ್ವಾಸಮತ ಗೆದ್ದ ಬಳಿಕ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂದೆ, ಥಾಣೆಯಲ್ಲಿ ಶಿವಸೇನೆಯ ಕಾರ್ಪೋರೇಟರ್ ಆಗಿ ಕೆಲಸ ಮಾಡ್ತಿದ್ದಾಗ ನನ್ನ ಎರಡು ಮಕ್ಕಳನ್ನು ಕಳೆದುಕೊಂಡೆ. ಈ ವೇಳೆ ಎಲ್ಲವೂ ಮುಗಿದು ಹೋಯಿತು ಎಂದು ಭಾವಿಸಿದೆ. ಆದರೆ, ಶಿವಸೇನೆಯ ಆನಂದ್ ದಿಘೆ ಸಾಹೇಬ್​ ನನಗೆ ಮನವರಿಕೆ ಮಾಡಿಕೊಟ್ಟರು. ಹೀಗಾಗಿ ರಾಜಕೀಯದಲ್ಲಿ ಮುಂದುವರೆಯಬೇಕಾಯಿತು ಎಂದು ಕುಟುಂಬವನ್ನ ನೆನಪಿಸಿಕೊಂಡು ಕಣ್ಣೀರು ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!