ಈಶ್ವರಪ್ಪ, ಸೋಮಣ್ಣ ಬಳಿಕ ಸುಧಾಕರ್ ದೆಹಲಿಗೆ ದೌಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವರಾದ ಈಶ್ವರಪ್ಪ ಹಾಗೂ ಸೋಮಣ್ಣ ನಂತರ ಇದೀಗ ಸುಧಾಕರ್ ಹೈಕಮಾಂಡ್ ಕದ ತಟ್ಟಿದ್ದಾರೆ.

ಲೋಕಸಭೆ ಟಿಕೆಟ್‌ಗಾಗಿ ಕಸರತ್ತು ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಸುಧಾಕರ್ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್-ಬಿಜೆಪಿ ಮೈತ್ರಿ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಸುಧಾಕರ್ ಭೇಟಿ ಮಾಡಿದ್ದು, ಟಿಕೆಟ್ ಕೊಡಿಸುವಂತೆ ಲಾಭಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭೇಟಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!