ಜಾಮೀನು ಸಿಕ್ಕ ಬೆನ್ನಲ್ಲೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೆ ಅರೆಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನಿನ ನೀಡಿದ್ದು, ಇದರ ಬೆನ್ನಲ್ಲೇ ಮತ್ತೆ ಮಂಗಳವಾರ ಬಂಧಿಸಲಾಗಿದೆ.

ಅವರು ನ್ಯಾಯಾಂಗ ಬಂಧನದಲ್ಲಿದ್ದು, ಆಗಸ್ಟ್ 30 ರ ಬುಧವಾರ ನ್ಯಾಯಾಲಯಕ್ಕೆಹಾಜರುಪಡಿಸಲಾಗುವುದು.ಈ ಪ್ರಕರಣದಲ್ಲಿ ಅವರನ್ನು ಅಧಿಕೃತ ರಹಸ್ಯ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇಮ್ರಾನ್ ಖಾನ್ ಅವರು ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದಾಗ ರಾಜಕೀಯ ಉದ್ದೇಶಗಳಿಗಾಗಿ ಗೌಪ್ಯ ರಾಜತಾಂತ್ರಿಕ ಕೇಬಲ್ (ಸೈಫರ್) ಅನ್ನುದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!