ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ, ನಾನು ಕೊಲೆ ಮಾಡಿಲ್ಲ ಎಂದು ನಟ ದರ್ಶನ್ ಹೇಳಿದ್ದಾರೆ.
ವಿಚಾರಣೆ ವೇಳೆ ದರ್ಶನ್ ಸರ್ ನನಗೇನು ಗೊತ್ತಿಲ್ಲ ಅವನನ್ನ ಕರ್ಕೊಂಡ್ ಬಂದಿರೋದು ನನಗೆ ಗೊತ್ತಿಲ್ಲ, ನಾನು ಶೆಡ್‌ನಿಂದ ಬಂದಮೇಲೆ ಇಷ್ಟೆಲ್ಲಾ ನಡೆದಿದೆ. ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ. ಹುಡುಗರ ಜೊತೆ ಮದ್ಯ ಹಾಕುತ್ತಿದ್ದಾಗ ಪವನ ಅಲ್ಲಿಗೆ ಬಂದಿದ್ದ. ನನ್ನ ಕಿವಿಯಲ್ಲಿ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ಹೇಳಿದ.
ನಾನು ಸೀದಾ ಅಲ್ಲಿಂದ ಮನೆಗೆ ಹೋಗಿ ಪವಿತ್ರಾಳನ್ನು ಕರೆದುಕೊಂಡು ಶೆಡ್‌ಗೆ ಹೋದೆ. ಅವನನ್ನು ಕೊಲೆ ಮಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ. ನಾಲ್ಕು ಬಾರಿಸಿ ಸಾರಿ ಕೇಳಿಸೋಣ ಎಂದುಕೊಂಡಿದ್ದೆ. ನನ್ನ ಪವಿತ್ರಾನ ನೋಡುತ್ತಿದ್ದಂತೆ ಅವನು ತಪ್ಪಾಯ್ತು ಅಂತ ಕೇಳಿಕೊಂಡ. ಆಮೇಲೆ ನಾನು ಅವನಿಗೆ ಊಟಕ್ಕೆ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರಿಗೆ ಹೋಗು ಅಂತ ಹೇಳಿ ಬಂದೆ. ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ. ಅಷ್ಟೇ ಸರ್ ವಿಷಯ. ನನಗೆ ಬೇರೆ ಏನು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇದು ಸುಳ್ಳು ಇವ್ನು ಇವಾಗ ತಪಿಸ್ಕೊಳೋಕೆ ನಾಟಕ ಅಡ್ತವ್ನೆ 😡😡😡😡😡😡