ಕಮಲ್ ಹಾಸನ್ ಬಳಿಕ ಕನ್ನಡಿಗರನ್ನು ಕೆಣಕಿದ ರಾಮ್ ಗೋಪಾಲ್ ವರ್ಮಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಕಮಲ್ ಹಾಸನ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ಬಿಡುಗಡೆ ಆಗಬೇಕಿದೆ. ಆದರೆ ಈ ಸಿನಿಮಾವನ್ನು ಕರ್ನಾಟಕದಲ್ಲಿ ತೆರೆ ಕಾಣಿಸಲು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ.

ಇದೀಗ ಈ ವಿಚಾರವಾಗಿ ‘ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ. ಕಮಲ್ ಬಳಿಕ ರಾಮ್ ಗೋಪಾಲ್ ವರ್ಮಾ ಕೂಡ ಕನ್ನಡಿಗರನ್ನು ಕೆಣಕಿದ್ದಾರೆ.

ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿರುವುದನ್ನು ರಾಮ್ ಗೋಪಾಲ್ ವರ್ಮಾ ಅವರು ಖಂಡಿಸಿದ್ದಾರೆ.

‘ಅಸಹಿಷ್ಣುತೆಯೇ ಪ್ರಜಾಪ್ರಭುತ್ವದ ಹೊಸ ಹೆಸರು. ಸತ್ಯಾಂಶ ಏನೇ ಇದ್ದರೂ ಕೂಡ, ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಥಗ್​ ಲೈಫ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಅಂತ ಬೆದರಿಕೆ ಹಾಕುವುದು ಹೊಸ ಥರದ ಗೂಂಡಾಗಿರಿ’ ಎಂದು ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ಆದರೆ ಕೂಡಲೇ ಅದನ್ನು ಅವರು ಡಿಲೀಟ್ ಮಾಡಿದ್ದಾರೆ.

ಸದ್ಯಕ್ಕಂತೂ ಕಮಲ್ ಹಾಸನ್ ಅವರು ಕ್ಷಮೆ ಕೇಳುವ ಮನಸ್ಸು ಮಾಡಿಲ್ಲ. ಸಿನಿಮಾ ಬ್ಯಾನ್ ಮಾಡಬಾರದು ಎಂದು ಅವರು ಕೋರ್ಟ್ ಮೊರೆ ಹೋಗಿದ್ದಾರೆ. ಕರ್ನಾಟಕದಲ್ಲಿ ಅವರ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ಭಾಷೆಯ ವಿಷಯ ಆದ್ದರಿಂದ ಅನೇಕ ಸೆಲೆಬ್ರಿಟಿಗಳು ಕೂಡ ಕಮಲ್ ಹಾಸನ್ ಅವರನ್ನು ಖಂಡಿಸುತ್ತಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!