ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಯಾರಾಗಲಿದ್ದಾರೆ ರಾಜ್ಯದ ನಾಯಕ ಎಂಬುದಕ್ಕೆ ಇಂದು ತೆರೆಬೀಳಲಿದೆ. ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲಿನಲ್ಲಿ ನಿಂತಿದ್ದು, ಈ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸದಲ್ಲಿವೆ ಮೂರು ಪಕ್ಷಗಳು. ಬೆಳಗ್ಗೆಯಿಂದ ಮತೆಣಿಕೆ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬೆಳಗ್ಗೆಯಿಂದ ಮತಎಣಿಕೆ ಕಾರ್ಯ ನಡೆಯುತ್ತಿದ್ದು, 113ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಸತತ ಒಂದು ತಾಸಿನ ಬಳಿಕ ನಡೆದ ಮತಎಣಿಕೆ ಫಲಿತಾಂಶದಲ್ಲಿ ಕಾಂಗ್ರೆಸ್ ದಾಪುಗಾಲು ಹಾಕಿದ್ದು, ಬಿಜೆಪಿ, ಜೆಡಿಎಸ್ ಅನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿ ನಿಂತಿದೆ. ಒಟ್ಟಾರೆ 113ಕ್ಷೇತ್ರಗಳಲ್ಲಿ ಕಾಂಗೆಸ್ ಪಕ್ಷ ಮುನ್ನಡೆ ಸಾಧಿಸಿದೆ.