ಹೊಸ ದಿಗಂತ ಡಿಜಿಟಲ್ ಡೆಸ್ಕ್
ದೆಹಲಿಯಿಂದ ದುಬೈಗೆ ಹಾರುತ್ತಿದ್ದ ಸ್ಪೈಸ್‌ಜೆಟ್ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಬೆನ್ನಲ್ಲೇ ಇದೀಗ ಗುಜರಾತಿನ ಕಾಂಡ್ಲಾದಿಂದ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನದ ಹೊರಭಾಗದ ವಿಂಡ್‌ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.
ಮುಂಬೈನಲ್ಲಿ ವಿಮಾನ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಪೈಸ್‌ಜೆಟ್ ಕ್ಯೂ400 ವಿಮಾನದಲ್ಲಿ ಕ್ರೂಸ್ ನ P2 ಸೈಡ್ ನ ಹೊರಗಿನ ವಿಂಡ್‌ಶೀಲ್ಡ್ ಬಿರುಕು ಬಿಟ್ಟಿತು. ಪರಿಶೀಲನೆಗೆ ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಏರ್‌ಲೈನ್ ತಿಳಿಸಿದೆ.
ಇಂದು ಬೆಳಗ್ಗೆ ಇಂಡಿಕೇಟರ್ ಲೈಟ್ ನಲ್ಲಿ ಸಮಸ್ಯೆಯುಂಟಾದ ಕಾರಣ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು.