ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದ ಕಾಂಗ್ರೆಸ್ ಪಕ್ಷ, ಇಂದು ತನ್ನ ಉನ್ನತ ಮಟ್ಟದ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದೆ.
ಕಾಂಗ್ರೆಸ್ ಮುಂದಿನ ಚುನಾವಣೆಗೆ ಯಾವ ರೀತಿ ಹೆಜ್ಜೆ ಇಡಬೇಕು, ಈ ಚುನಾವಣೆಯಲ್ಲಿ ಯಾವಕಾರಣಕ್ಕೆ ಸೋಲು ಕಂಡಿತು ಎಂಬುದರ ಬಗ್ಗೆ ಆತ್ಮಾವಲೋಕನೆ ನಡೆಸಲಿದೆ. ಇದರ ಜತೆಗೆ ಮಾ.14 (ನಾಳೆ) ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವೆಲ್ಲಾ ವಿಚಾರಗಳನ್ನು ಪ್ರಸ್ಯಾಪಿಸಬೇಕು ಎಂದು ಚರ್ಚೆ ನಡೆಯಲಿದೆ.
ಈ ಸಭೆಗೆ ತಮ್ಮ ಪಕ್ಷದ ನಾಯಕರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಹ್ವಾನಿಸಿದ್ದೂ, ಎಲ್ಲರಿಗೂ ಮುಕ್ತವಾಗಿ ಮಾತನಾಡಬೇಕು ಎಂದಿದ್ದಾರೆ.
ಇಂದು ಸಂಜೆ 4 ಗಂಟೆ ನಂತರ ದೆಹಲಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಚುನಾವಣೆ ನಡೆದ ಮೂರೇ ದಿನಕ್ಕೆ ಕೇಂದ್ರ ಕಾರ್ಯಕಾರಿ ಸಮಿತಿ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಬಾರಿ ಕಾಂಗ್ರೆಸ್ ಚುನಾವಣೆಯನ್ನು ಹೆಚ್ಚಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸೋದರಿ ಪ್ರಿಯಾಂಕಾ ಗಾಂಧಿ ಜಂಟಿಯಾಗಿ ಮಾಡಿದ್ದರು.
ಇನ್ನು ಪಕ್ಷದ ವತಿಯಿಂದ ವಿವಿಧ ರಾಜ್ಯಗಳ ಉಸ್ತುವಾರಿ ಹೊತ್ತಿದ್ದ ಅಧಿಕಾರಿಗಳು ಪಕ್ಷದ ಕಾರ್ಯಾಚರಣೆಯ ಕುರಿತು ವರದಿ ಸಲ್ಲಿಸಲಿದ್ದಾರೆ.
ಪಂಜಾಬ್ ನಲ್ಲಿ ಕಾಂಗ್ರೆಸ್ ಎಎಪಿ ಎದುರು ಸೋತಿರುವುದು ಪಕ್ಷಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ. ಇನ್ನು 2022ರ ಅಂತ್ಯದ ವೇಳೇಗೆ ಪಕ್ಷ ಬಲಗೊಳಿಸುವ ಬಗ್ಗೆ ಚರ್ಚೆ ನಡೆಯಲಿದೆ.