ಕಾಂಗ್ರೆಸ್‌ನಿಂದ ಮತ್ತೊಂದು ಯಾತ್ರೆ: ‘ಮಹಿಳಾ ಜೋಡೋ ಯಾತ್ರೆ’ ಹೆಸರಿನಲ್ಲಿ ಪಾದಯಾತ್ರೆಗೆ ಪ್ರಿಯಾಂಕಾ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬರುವ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ಇದಕ್ಕಾಗಿ ಸಾಧ್ಯವಿರುವ ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ. ಜನರನ್ನು ತಲುಪಲು ಈಗಾಗಲೇ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ’ ನಡೆಯುತ್ತಿರುವುದು ಗೊತ್ತೇ ಇದೆ. ಸದ್ಯದಲ್ಲೇ ಈ ಯಾತ್ರೆ ಮುಗಿಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಂದು ಯಾತ್ರೆಗೆ ಸಿದ್ಧತೆ ನಡೆಸಿದೆ.

ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಈ ಪ್ರವಾಸ ಕೈಗೊಳ್ಳಲಿದ್ದಾರೆ. ‘ಮಹಿಳಾ ಜೋಡೋ ಯಾತ್ರೆ’ ಹೆಸರಿನಲ್ಲಿ ಪ್ರಿಯಾಂಕಾ ಹೆಜ್ಜೆ ಹಾಕಲಿದ್ದಾರೆ. ಮುಂದಿನ ವರ್ಷ ಆರಂಭವಾಗಲಿರುವ ಮೊದಲ ಹಂತದ ಪ್ರವಾಸ ಎರಡು ತಿಂಗಳ ಕಾಲ ನಡೆಯಲಿದೆ. ಈ ಯಾತ್ರೆ ಜನವರಿ 26 ರಿಂದ ಮಾರ್ಚ್ 26 ರವರೆಗೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಇದಕ್ಕಾಗಿ ಪಕ್ಷವು ಯೋಜನೆಗಳನ್ನು ಸಿದ್ಧಪಡಿಸುತ್ತಿದೆ. ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಈ ಪ್ರವಾಸವನ್ನು ಆಯೋಜಿಸಲಿದೆ. ಚುನಾವಣೆಯಲ್ಲಿ ಮಹಿಳಾ ಮತದಾರರ ಪಾತ್ರ ನಿರ್ಣಾಯಕವಾಗಿದೆ. ಕೆಲವು ಕ್ಷೇತ್ರಗಳಲ್ಲಿ ಮಹಿಳೆಯರ ಮತಗಳೇ ವಿಜೇತರನ್ನು ನಿರ್ಧರಿಸುತ್ತವೆ.

ಹಾಗಾಗಿ ಕಾಂಗ್ರೆಸ್ ಮಹಿಳೆಯರ ಮೇಲೆ ತನ್ನ ಗಮನ ಕೇಂದ್ರೀಕರಿಸಿದೆ. ತಾವು ಯಾವಾಗಲೂ ಮಹಿಳೆಯರಿಗೆ ಆದ್ಯತೆ ನೀಡುತ್ತದೆ ಎಂದು ಪಕ್ಷ ಹೇಳಿಕೊಂಡಿದೆ. ಎರಡು ದಶಕಗಳಿಂದ ತಮ್ಮ ಪಕ್ಷವನ್ನು ಮಹಿಳೆಯೇ ಮುನ್ನಡೆಸಿಕೊಂಡು ಬಂದಿದ್ದು, ಮಹಿಳಾ ಮೀಸಲಾತಿ ಮಸೂದೆಗೆ ಸಕಾರಾತ್ಮಕವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!