ಶೂಟಿಂಗ್ ಮುಗಿಸಿ ಮನೆಗೆ ಬಂದು 7ನೇ ಮಹಡಿಯಿಂದ ಜಿಗಿದ ಜೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಹುಮಹಡಿ ಕಟ್ಟಡದಿಂದ ಜಿಗಿದು ಹಾರಿ ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದ ಜೋಡಿಯೊಂದು ಪ್ರಾಣ ಕಳೆದುಕೊಂಡಿರುವ ಘಟನೆ ಹರಿಯಾಣದ ಬಹದ್ದೂರ್​ಗಢದಲ್ಲಿ ನಡೆದಿದೆ.

ಮೃತರನ್ನು ಗರ್ವಿತ್​ (25), ನಂದಿನಿ (22) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಕಂಟೆಂಟ್​ ಕ್ರಿಯೇಟರ್ಸ್​ ಆಗಿದ್ದು ಯೂಟ್ಯೂಬ್​ನಲ್ಲಿ ತಮ್ಮದೇ ಚಾನೆಲ್​ ಹೊಂದಿದ್ದರು .

ಮೃತರಿಬ್ಬರು ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದರು. ಕೆಲ ದಿನಗಳ ಹಿಂದೆ ಇವರಿಬ್ಬರು ತಮ್ಮ ತಂಡದೊಂದಿಗೆ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಶಿಫ್ಟ್​​ ಆಗಿದ್ದರು. ರುಹೀಲಾ ರೆಸಿಡೆನ್ಸಿಯ ಏಳನೇ ಮಹಡಿಯಲ್ಲಿ ಫ್ಲ್ಯಾಟ್​ ಒಂದನ್ನು ಬಾಡಿಗೆಗೆ ಪಡೆದು ತಮ್ಮ ತಂಡದೊಂದಿಗೆ ವಾಸವಿದ್ದರು.

ಶನಿವಾರ ತಡರಾತ್ರಿ ಚಿತ್ರೀಕರಣ ಮುಗಿಸಿ ಮನೆಗೆ ವಾಪಸ್​ ಆದ ಬಳಿಕ ಇವರಿಬ್ಬರ ನಡುವೆ ಕಂಟೆಂಟ್​ ವಿಚಾರವಾಗಿ ಜಗಳವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಮನೆಯ ಬಾಲ್ಕನಿಯಿಂದ ಬೆಳಗ್ಗೆ 6 ಗಂಟೆ ಸುಮಾರಿಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಫೋರೆನ್ಸಿಕ್​ ಅಧಿಕಾರಿಗಳು ಮಾದರಿಗಳನ್ನು ಸಂಗ್ರಹಿಸಿದ್ದು, ಅವರು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!