Thursday, June 1, 2023

Latest Posts

ಇಮ್ರಾನ್ ಖಾನ್ ಬಂಧನ ಬೆನ್ನಲ್ಲೇ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ಬೆನ್ನಲ್ಲೇ ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೊಹಮ್ಮದ್ ಖುರೇಶಿ ಅವರನ್ನು ಬಂಧಿಸಲಾಗಿದೆ.

ಪಾಕ್ ಪೊಲೀಸರು ಖುರೇಷಿ ಅವರನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎನ್ನಲಾಗಿದೆ. ಪಂಜಾಬ್ ಮತ್ತು ಖೈಬರ್ ಪಖ್ತುಂಕ್ವಾದಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಖುರೇಶಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಬಂಧನಕ್ಕೂ ಮುನ್ನ ನಾನು ಯಾವುದೇ ತಪ್ಪು ಮಾಡಿಲ್ಲ. ಆತಂಕ ಪಡಬೇಕಿಲ್ಲ, ದೇಶದಲ್ಲಿ ನಿಜವಾದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮುಂದುವರಿಯಲಿ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!