SHOCKING | ಕೆಫೆ ಬಾಂಬ್ ಬ್ಲಾಸ್ಟ್ ಬೆನ್ನಲ್ಲೇ ನಿರ್ಮಾಣ ಹಂತದ ಕಟ್ಟಡದಲ್ಲಿ 6 ಬಾಂಬ್ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಬೆನ್ನಲ್ಲೇ ಇದೀಗ ಬಿಹಾರದಲ್ಲಿ ಆರು ಸಜೀವ ಬಾಂಬ್ ಪತ್ತೆಯಾಗಿದೆ.

ಬಿಹಾರದ ದರ್ಭಾಂಗದಲ್ಲಿ ಕಾಮಗಾರಿ ನಡೆಯುತ್ತಿರುವ ಮನೆಯಲ್ಲಿ ಆರು ಬಾಂಬ್‌ಗಳು ಪತ್ತೆಯಾಗಿವೆ. ಎರಡು ಬಾಂಬ್‌ಗಳು ಸ್ಫೋಟವಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ಎರಡು ಬಾಂಬ್‌ಗಳು ಪೀಸ್‌ಗಳಲ್ಲಿ ಸಿಕ್ಕಿದೆ. ಹುಡುಕಾಟ ನಡೆಸಿದಾಗ ಆರು ಬಾಂಬ್‌ಗಳು ಪತ್ತೆಯಾಗಿದ್ದು, ಅವುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಇದನ್ನು ಇಟ್ಟವರು ಯಾರು? ಇದಕ್ಕೂ ಬೆಂಗಳೂರಿನ ಬ್ಲಾಸ್ಟ್‌ಗೂ ಲಿಂಕ್ ಇದೆಯಾ? ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!