ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದೆ ಸುಮಲತಾ ಮಹತ್ವದ ಸಭೆ ನಡೆಸಿದ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಿದ್ದಾರೆ.
ಹೆಚ್ ಡಿಕೆ ಇಂದು ಮಂಡ್ಯ ಪ್ರವಾಸದಲ್ಲಿದ್ದು. ದಿ.ಅಂಬರೀಶ್ ಸಮಾಧಿ ಬಳಿ ಪುಷ್ಪಾರ್ಚನೆ ಮಾಡಲಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.
ಸಂಜೆ 4.30ಕ್ಕೆ ರೈತ ಹೋರಾಟಗಾರ ಮಾಜಿ ಸಂಸದ ಜಿ.ಮಾದೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿ, ನಂತರ 4.45ಕ್ಕೆ ಅಂಬರೀಶ್ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಚುನಾವಣಾ ಪ್ರಚಾರ ಹಿನ್ನೆಲೆ ಮಾಜಿ ಸಿಎಂ ಹೆಚ್‌ಡಿಕೆ, ಮಂಡ್ಯ ಕಾರ್ಯಕರ್ತರು, ಮುಖಂಡರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಮಂಡ್ಯದ ಮಹಾನ್ ನಾಯಕರ ಕುಟುಂಬದವರು ಹಾಗೂ ಬೆಂಬಲಿಗರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಲಿದ್ದಾರೆ.