ಲೋಕಸಭೆ ಬಳಿಕ ರಾಜಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಅಂಗೀಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯಸಭೆಯಲ್ಲಿ ಇಂದು ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಇಂದು (ಸದನದಲ್ಲಿ) ಪ್ರತಿಪಕ್ಷಗಳು ಮಸೂದೆಯ ಬಗ್ಗೆ ಚರ್ಚಿಸಿದ್ದರೆ ಚೆನ್ನಾಗಿರುತ್ತಿತ್ತು. ಆದರೆ ಯಾವುದೇ ವಿರೋಧ ಪಕ್ಷದ ನಾಯಕರಿಗೆ ಅಥವಾ ಸದಸ್ಯರಿಗೆ ನಾಗರಿಕರ ಹಕ್ಕುಗಳ ಬಗ್ಗೆ ಕಾಳಜಿ ಇಲ್ಲಎಂದರು. ಸಾರ್ವಜನಿಕ ಸಮಾಲೋಚನೆಯ ನಂತರ ಈ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದರು.

ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಈ ವಿಧೇಯಕದಲ್ಲಿ ರೂಪಿಸಲಾಗಿದ್ದು, ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!