Saturday, October 1, 2022

Latest Posts

ಮೂರು ವರ್ಷಗಳ ಬಳಿಕ ಅಬ್ಬರದ ಶತಕ ಬಾರಿಸಿದ ವಿರಾಟ್​ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೂರು ವರ್ಷಗಳ ಬಳಿಕ ಬ್ಯಾಟಿಂಗ್​ ಕಿಂಗ್​ ವಿರಾಟ್​ ಕೊಹ್ಲಿ ಶತಕ ಸಾಧನೆ ಮಾಡಿದ್ದಾರೆ.
ಏಷ್ಯಾ ಕಪ್​ ಟೂರ್ನಿಯಲ್ಲಿ ಇಂದು ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅಬ್ಬರದ ಶತಕ ಬಾರಿಸಿದ್ದಾರೆ.

52 ಎಸೆತಗಳಲ್ಲಿ ಶತಕ ದಾಖಲು ಮಾಡುವ ಮೂಲಕ ಅಂತಾರಾಷ್ಟ್ರೀಯ ಟಿ20ಯಲ್ಲಿ ತಮ್ಮ ಮೊಟ್ಟಮೊದಲ ಶತಕ ದಾಖಲು ಮಾಡಿದರು. ಆ ಮೂಲಕ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲಿ ಶತಕ ಬಾರಿಸಿದ ವಿಶ್ವದ ಕೆಲವೇ ಕೆಲವು ಆಟಗಾರರಲ್ಲಿ ವಿರಾಟ್‌ ಕೊಹ್ಲಿ ಒಬ್ಬರಾಗಿದ್ದಾರೆ.

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲ 50 ರನ್‌ ಬಾರಿಸಲು 32 ಎಸೆತ ಎಸೆತ ತೆಗದುಕೊಂಡ ವಿರಾಟ್‌ ಕೊಹ್ಲಿ ನಂತರದ 50 ರನ್‌ಗಳನ್ನು ಬಾರಿಸಲು ಕೇವಲ 20 ಎಸೆತಗಳನ್ನು ತೆಗೆದುಕೊಂಡರು.
ಕೊನೆಗೂ ಅಂದಾಜು 1 ಸಾವಿರ ದಿನಗಳ ಬಳಿಕ ವಿಶ್ವ ಕ್ರಿಕೆಟ್‌ನ ಸೂಪರ್‌ ಸ್ಟಾರ್ ಆಟಗಾರ ತಮ್ಮ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!