ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಈಗಾಗಲೇ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ.
ಊಟದ ನಂತರ ಶಾಸಕರು ಸರಿಯಾದ ಸಮಯಕ್ಕೆ ಕಲಾಪಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಮಧ್ಯಾಹ್ನದ ಕಲಾಪ ವಿಳಂಬವಾಗಬಾರದೆಂದು ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.