ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ 83 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ ನಂತರ, ಈ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಸಂಖ್ಯೆ 635ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.