ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಿ: ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು:

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಚಿವ ಈಶ್ವರಪ್ಪ ಅವರೇ ಹೊಣೆಯಾಗಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದ್ದಾರೆ.
ಪರ್ಸಂಟೇಜ್ ಕಮಿಷನ್‌ನಿಂದ ನ್ಯಾಯ ಸಿಗದೆ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿರುವ ಕಾರಣ ಇದು ಹತ್ಯೆಗೆ ಸಮಾನವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.
40 ಶೇ. ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಅದು ಚರ್ಚೆಯ ವಿಷಯ. ಆದರೆ ಪ್ರಧಾನಿ ನಿರ್ಲಕ್ಷ್ಯ ವಹಿಸಿದ್ದು ಇಂದು ಇಂತಹ ಸ್ಥಿತಿಗೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಅವರ ಡೆತ್‌ನೋಟ್‌ಗೆ ಪೂರಕವಾಗಿ ಅವರ ಪತ್ನಿ ಹಾಗೂ ಸಹೋದರರ ಹೇಳಿಕೆ ಈ ಮಾತುಗಳಿಗೆ ಪುಷ್ಟಿ ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಕೃಪಾ ಅಮರ್ ಆಳ್ವ, ಮಮತಾ ಗಟ್ಟಿ, ಮುಖಂಡರಾದ ಶಶಿಧರ ಹೆಗ್ಡೆ, ಹರಿನಾಥ್, ಜಯಶೀಲ ಅಡ್ಯಂತಾಯ, ಪುರುಷೋತ್ತಮ ಚಿತ್ರಾಪುರ, ಅಬ್ದುಲ ರವೂಫ್, ಅಶೋಕ್ ಡಿ.ಕೆ., ಉಮೇಶ್ ದಂಡಕೇರಿ, ಬೇಬಿ ಕುಂದರ್, ಮುಸ್ತಫಾ, ಶಬ್ಬೀರ್, ನಝೀರ್ ಬಜಾಲ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!