Thursday, August 11, 2022

Latest Posts

ಗಣಿಗಾರಿಕೆ ವಿರುದ್ಧದ ನನ್ನ ಹೋರಾಟಕ್ಕೆ ಯಾರು ಬೇಕಾದರೂ ಕೈ ಜೋಡಿಸಲಿ: ಸುಮಲತಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಮಂಡ್ಯ :

ಜಿಲ್ಲೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ನನ್ನ ಹೋರಾಟವೇ ವಿನಃ ಬೇರೇನೂ ಇಲ್ಲ. ಯಾರೂ ಬೇಕಾದರೂ ಈ ಹೋರಾಟಕ್ಕೆ ಕೈ ಜೋಡಿಸಬಹುದು ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣಿಗಾರಿಕೆ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಎಸ್. ಜಲಾಶಯಕ್ಕೆ ಗಣಿಗಾರಿಕೆಯಿಂದ ಧಕ್ಕೆ ಉಂಟಾಗುತ್ತದೆ ಎಂಬ ವರದಿ ಹಿನ್ನಲೆಯಲ್ಲಿ ಈ ಹೋರಾಟಕ್ಕೆ ಧುಮುಕಿದ್ದೇನೆ. ಇದಕ್ಕೆ ಜನಪ್ರತಿನಿಧಿಗಳು ಸಾತ್ ನೀಡಿದರೆ ಸ್ವಾಗತಿಸುತ್ತೇನೆ ಎಂದರು.
ನಾಳೆ ಈ ಬಗ್ಗೆ ಕೆ.ಆರ್.ಎಸ್.ನಲ್ಲಿ ಅಧಿಕಾರಿಗಳ ಸಭೆ ಕರೆದಿದ್ದೇನೆ. ಪರಿಶೀಲನೆ, ಸಭೆ ಬಳಿಕ ವರದಿ ಪಡೆದು ಸಂಬಂಧಿಸಿದ ಗಣಿ ಸಚಿವರೊಂದಿಗೆ ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ಹೇಳಿದರು.
ಪರಿಶೀಲನೆ, ಸಭೆಗೆ ಯಾರು ಬೇಕಾದರೂ ಬರಬಹುದು. ಅವರೂ ಸಹ ಜನಪ್ರತಿನಿಧಿಗಳೇ. ನನ್ನ ಜೊತೆಗೆ ಬಂದರೆ ನಾನು ಯಾವುದೇ ಕಾರಣಕ್ಕೂ ಬೇಡ ಎನ್ನುವುದಿಲ್ಲಘಿ. ಒಟ್ಟಾರೆ ಜನರಿಗೆ ಒಳ್ಳೆಯದಾಗಬೇಕು ಅಷ್ಟೆ ನನ್ನ ಅಭಿಲಾಶೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss