ರಾಯಲ್ಸ್​ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

35ನೇ ವಸಂತಕ್ಕೆ ಕಾಲಿಟ್ಟಿರುವ ಸಂಭ್ರಮದಲ್ಲಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 15ನೇ ಆವೃತ್ತಿಯಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದು, ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸತತ 8 ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಮೊದಲ ಗೆಲುವಿಗಾಗಿ ಹಾತೊರೆಯುತ್ತಿದ್ದು, ಇಂದು 2 ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಟಿಮ್​ ಡೇವಿಡ್​ ಹಾಗೂ ಬದಲೀ ಆಟಗಾರನಾಗಿ ತಂಡಕ್ಕೆ ಸೇರಿಕೊಂಡಿರುವ ಕುಮಾರ್ ಕಾರ್ತಿಕೇಯನ್​ ಅವರಿಗೆ ಅವಕಾಶ ನೀಡಿದೆ. ಇವರಿಗೆ ಬ್ರೇವಿಸ್ ಮತ್ತು ಉನಾದ್ಕಟ್​ ಜಾಗ ಬಿಟ್ಟುಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!