ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು: 4-1 ಅಂತರದಿಂದ ಸರಣಿ ಕೈವಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಜು ಸ್ಯಾಮ್ಸನ್​ ಅರ್ಧ ಶತಕ ಹಾಗೂ ಮುಕೇಶ್ ಕುಮಾರ್ ಅವರ 4 ವಿಕೆಟ್​ ಸಾಧನೆಯೊಂದಿಗೆ ಮಿಂಚಿದ ಆತಿಥೇಯ ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಟಿ20 ಸರಣಿಯ ಐದನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ ಭಾರತ ತಂಡ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಹರಾರೆ ಸ್ಪೋರ್ಟ್ಸ್​ ಕ್ಲಬ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಜಿಂಬಾಬ್ವೆ ತಂಡ ಫೀಲ್ಡಿಂಗ್ ಆಯ್ಕೆ ಮಾಡಿತು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಜಿಂಬಾಬ್ವೆ 18.3 ಓವರ್​ಗಳಲ್ಲಿ 125 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 22 ರನ್​ಗಳಿಎ 4 ವಿಕೆಟ್​ ಉರುಳಿಸಿದರೆ ಶಿವಂ ದುಬೆ 2 ವಿಕೆಟ್ ತಮ್ಮದಾಗಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!