ಮಣಿಪಾಲದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಅರಣ್ಯ ಪ್ರದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ನಗರದ ಮಣಿಪಾಲ ಸಮೀಪದ 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.

ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯು ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿ, ರಾಜೀವನಗರದ ರತ್ನ‌ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳನ್ನು ಆಹುತಿ ಪಡೆದವು‌ .
ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!