ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗ್ನಿಪಥ್ ಯೋಜನೆಗೆ ಸುಪ್ರೀಂ ಕೋರ್ಟ್ ಮಾನ್ಯತೆ (Agnipath scheme valid) ನೀಡಿದೆ.
ಕೇಂದ್ರ ಸರ್ಕಾರದ ಇಷ್ಟಾನುಸಾರ, ಏಕಪಕ್ಷೀಯ ಯೋಜನೆ ಅದಲ್ಲ ಎಂದು ಯೋಜನೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ (ಏಕಪಕ್ಷೀಯ) ಸೋಮವಾರ ಎತ್ತಿಹಿಡಿದಿದೆ.
ರಕ್ಷಣ ಪಡೆಗಳಲ್ಲಿ ಯುವ ಜನತೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳುವಯೋಜನೆಯ ವಿರುದ್ಧ ಸಲ್ಲಿಸಲಾಗಿದ್ದ ಎರಡು ಮೇಲ್ಮನವಿಗಳನ್ನು ಕೋರ್ಟ್ ತಿರಸ್ಕರಿಸಿದೆ.
ಯೋಜನೆ ಜಾರಿಯಾಗುತ್ತಿದ್ದಂತೆ ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ನಲ್ಲಿ ಯೋಜನೆಯನ್ನು ಪ್ರಶ್ನಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ಎತ್ತಿಹಿಡಿದಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಎರಡು ಮೇಲ್ಮನವಿಗಳನ್ನು ಸಲ್ಲಿಸಲಾಯಿತು.
ಈ ವೇಳೆ ಸುಪ್ರೀಂ , ಕ್ಷಮಿಸಿ, ನಾವು ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಹೈಕೋರ್ಟ್ ಎಲ್ಲಾ ಅಂಶಗಳೊಂದಿಗೆ ವ್ಯವಹರಿಸಿದೆ ಎಂದು ಸುಪ್ರೀಂಕೋರ್ಟ್ ಗೋಪಾಲ್ ಕ್ರಿಶನ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಿದ್ದ 2 ಪ್ರತ್ಯೇಕ ಅರ್ಜಿಗಳನ್ನು ಇಂದು ವಜಾಗೊಳಿಸಿತು.