ಅಗ್ನಿಪಥ್ ವಿರೋಧಿಸಿ ಭಾರತ್ ಬಂದ್‌ಗೆ ಕರೆ: ಹಲವು ರಾಜ್ಯಗಳಲ್ಲಿ ಬಿಗಿ ಪೊಲೀಸ್‌ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ʻಅಗ್ನಿಪಥ್ʼ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ʻಭಾರತ್ ಬಂದ್ʼ ಮಾಡಲು ಕೆಲ ಸಂಘಟನೆಗಳು ಕರೆ ನೀಡಿವೆ. ಅಗ್ನಿಪಥ್‌ ಭಾಗವಾಗಿ ಅಲ್ಪಾವಧಿಯ ನೇಮಕಾತಿ ನೀತಿಯನ್ನು ವಿರೋಧಿಸುತ್ತಾ ಘೋಷಿಸಿರುವ ಬಂದ್‌ ಹತ್ತಿಕ್ಕಲು ರೈಲ್ವೆ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಆಂತರಿಕ ಸಂವಹನದ ಸಹಾಯದಿಂದ ಎಲ್ಲಾ ಘಟಕಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ RPF ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಪರಾಧಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇಂಟರ್ನೆಟ್ ಸೇವೆಗಳ ಮೂಲಕ ಸಂವಹನ ನಡೆಸಬಹುದೆಂಬ ಕಾರಣಕ್ಕೆ ಬಿಹಾರದ 20 ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪಂಜಾಬ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸೇನಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗಲಭೆ ತಡೆಯುವ ಪ್ರಯತ್ನದಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಯುಪಿ, ತೆಲಂಗಾಣ, ಅಸ್ಸಾಂ, ಕೇರಳ ಮತ್ತು ಜಾರ್ಖಂಡ್‌ನಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಅದೇ ಸಮಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಮೊಬೈಲ್ ಫೋನ್‌ಗಳು, ವಿಡಿಯೋ ರೆಕಾರ್ಡಿಂಗ್ ಉಪಕರಣಗಳು ಮತ್ತು ಸಿಸಿಟಿವಿಯಂತಹ ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!