Friday, December 8, 2023

Latest Posts

ಸಿಯಾಚಿನ್‌ನಲ್ಲಿ ಅಗ್ನಿವೀರ್ ಅಕ್ಷಯ್ ಹುತಾತ್ಮ: 10 ಲಕ್ಷ ರೂ. ನೆರವು ಘೋಷಿಸಿದ ‘ಮಹಾ’ ಸಿಎಂ ಶಿಂಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಯಾಚಿನ್‌ನಲ್ಲಿ (Siachen) ಕರ್ತವ್ಯದ ವೇಳೆ ಹುತಾತ್ಮನಾದ ಅಗ್ನಿವೀರ್ (Agniveer) ಅಕ್ಷಯ್ ಲಕ್ಷ್ಮಣ್ ಗವಾಟೆ (Akshay Laxman Gawate) ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) 10 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಮಹಾರಾಷ್ಟ್ರದ (Maharashtra) ಬುಲ್ಧಾನಾ ಜಿಲ್ಲೆಯ ಪಿಂಪಲ್‌ಗಾಂವ್ ಸರಾಯ್ ಮೂಲದ ಗವಾಟೆ ಕಳೆದ ವಾರ ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದರು. ಅಗ್ನಿವೀರನ ಅಗಲಿಕೆಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಪಡೆಯ ಎಲ್ಲಾ ಶ್ರೇಣಿಗಳು ಸಂತಾಪ ಸೂಚಿಸಿದ್ದಾರೆ.

ಇದೀಗ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯ ಮಂತ್ರಿ ಶಿಂಧೆ ಸಂತಾಪ ಸೂಚಿಸಿದ್ದು, 10 ಲಕ್ಷ ರೂ. ಪರಿಹಾರ ಘೋಷಿಸಿರುವುದಾಗಿ ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!