ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಸಿದ್ದಿಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಪ್ರಜ್ನೆ ತಪ್ಪಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಪುಂಡರು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಜ್ಞಾಹೀನ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಆಗ್ರಾದಲ್ಲಿ ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ವ್ಯಕ್ತಿಗ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆತನನ್ನು ಪದೇ ಪದೇ ನಿಂದಿಸಿ ಒದೆಯುತ್ತಿರುವ ದೃಶ್ಯವಿದೆ. ಘಟನೆ ಹಳೆಯದಾದರೂ ಇದೀಗ ಆರೋಪಿಯನ್ನು ಗುರುತಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಮೂರ್ನಾಲ್ಕು ತಿಂಗಳ ಹಳೆಯದು ಎಂದು ಪೊಲೀಸರು ಹೇಳಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಗ್ರಾ ಉಪ ಪೊಲೀಸ್ ಆಯುಕ್ತ (ನಗರ) ಸೂರಜ್ ಕುಮಾರ್ ರಾಯ್ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಬೇರೆಯವರಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದರು.