spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮತ್ತೆ ರೈತರಿಗಾಗಿ ಅಗ್ರಿ ವಾರ್ ರೂಮ್ ಆರಂಭ: ಸಚಿವ ಬಿ.ಸಿ.ಪಾಟೀಲ್

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಹದಿನಾಲ್ಕು ದಿನಗಳ ಕರ್ಫ್ಯೂನಲ್ಲಿ ರೈತರಿಗಾಗಲಿ, ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಕೃಷಿ ಇಲಾಖೆ ಮತ್ತೆ ಅಗ್ರಿ ವಾರ್ ರೂಮ್ ಆರಂಭಿಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಕರ್ಫ್ಯೂ ಅವಧಿಯಲ್ಲಿ ಯಾವುದೇ ಇಲಾಖೆಯಾಗಲಿ, ಅಧಿಕಾರಿಗಳಾಗಲಿ ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡಬಾರದು ಎಂದು ಕೃಷಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ರೈತರಿಗೆ ನೆರವಾಗಲು ಮತ್ತೆ ಅಗ್ರಿ ವಾರ್ ರೂಮ್ ನೆರವು ಕಲ್ಪಿಸಲಿದೆ‌. ಕೃಷಿ ಕೇಂದ್ರ ಕಚೇರಿಯಲ್ಲಿ ಅಗ್ರಿ ವಾರ್ ರೂಮ್ ಮತ್ತೆ ತೆರೆದಿದ್ದು, 080-22210237 ಹಾಗೂ 080-22212818 ಈ ಸಂಖ್ಯೆಗಳು ಸಹಾಯವಾಣಿಯಾಗಿ ಕಾರ್ಯನಿರ್ವಹಿಸಲಿವೆ‌. ಅಗ್ರಿ ವಾರ್ ರೂಮ್ ಇಂದಿನಿಂದ ಆರಂಭವಾಗಿದ್ದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದೆ. ಇದಕ್ಕಾಗಿ ಕೃಷಿ ಪ್ರಧಾನ ಕಚೇರಿಯಲ್ಲಿ ಇಬ್ಬರು ತಾಂತ್ರಿಕ ಅಧಿಕಾರಿಗಳು ಹಾಗೂ ಒಬ್ಬ ಉಪ ಕೃಷಿ ನಿರ್ದೇಶಕರನ್ನು ಉಸ್ತುವಾರಿಗೆ ನೇಮಿಸಲಾಗಿದೆ.
ಕಳೆದ ಲಾಕ್​​ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿದ್ದ ಅಗ್ರಿ ವಾರ್ ರೂಮ್ ಯಶಸ್ವಿಯೂ ಆಗಿತ್ತು. ಅಲ್ಲದೆ ರೈತರಿಗೆ ನೆರವಾಗಿ 2020ನೇ ಸಾಲಿನಲ್ಲಿ ಕೋವಿಡ್ ನಿರ್ಬಂಧಿತ ಅವಧಿಯಲ್ಲಿಯೂ ಶೇ. 106ಕ್ಕೂ ಹೆಚ್ಚಿನ ದಾಖಲೆಯ ಬಿತ್ತನೆಯಾಗಲು ನೆರವಾಗಿತ್ತು. ಅದೇ ಮಾದರಿಯಲ್ಲಿ ಈ ಬಾರಿಯೂ ಅಗ್ರಿ ವಾರ್ ರೂಮ್ ಕಾರ್ಯನಿರ್ವಹಿಸಲಿದೆ.
ರೈತರು ತಾವು ಬೆಳೆದ ಹಣ್ಣು, ತರಕಾರಿ, ಹೂವು ಸೇರಿದಂತೆ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕುರಿತು ಮಾಹಿತಿ ನೀಡಲಿದ್ದು, ರೈತರು ಈ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಒಂದು ವೇಳೆ ದೂರವಾಣಿ ಮೂಲಕ ಮಾಹಿತಿ ಲಭ್ಯವಾಗದೆ ಇದ್ದಲ್ಲಿ ಅವುಗಳನ್ನು ಪಟ್ಟಿ ಮಾಡಿ ನಂತರ ಬಗೆಹರಿಸುವ ಪ್ರಯತ್ನವನ್ನೂ ಸಹ ಕೃಷಿ ಇಲಾಖೆ ಮಾಡಲಿದೆ. ಮುಂದಿನ ದಿ‌ನಗಳಲ್ಲಿ ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆಗಳನ್ನು ಸೇರಿಸಿ ಒಂದು ತಂಡವನ್ನಾಗಿ ಮಾಡಿ ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನೂ ಸಹ ನೀಡುವ ಚಿಂತನೆಯಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss