ಮಳೆಯಾರ್ಭಟಕ್ಕೆ ಕೇರಳದಲ್ಲಿ ಬರೋಬ್ಬರಿ 108.68 ಕೋಟಿ ರೂ. ಪ್ರಮಾಣದ ಕೃಷಿ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಗಾರು ಪೂರ್ವ ಭಾರೀ ಮಳೆಗೆ ಕೇರಳದಲ್ಲಿ ಬರೋಬ್ಬರಿ 108.68 ಕೋಟಿ ರೂ. ಪ್ರಮಾಣದ ಕೃಷಿ ಹಾನಿ ಉಂಟಾಗಿದೆ.

ಸರ್ಕಾರಿ ಅಂಕಿ ಅಂಶಗಳ ಪ್ರಕಾರ, ಈ ವರ್ಷ ಇದುವರೆಗೆ ಕೇರಳದಲ್ಲಿ 4453.71 ಹೆಕ್ಟೇರ್‌ನಷ್ಟು ಭಾಗದಲ್ಲಿ ಬೆಳೆಗಳು ನಾಶವಾಗಿವೆ. ಸುಮಾರು 25,729 ಮಂದಿ ರೈತರು ನಷ್ಟ ಅನುಭವಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಪೈಕಿ ಮಲಪ್ಪುರಂನಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಇಡುಕ್ಕಿಯಲ್ಲಿ ನಷ್ಟದ ಪ್ರಮಾಣ ಕಡಿಮೆಯಿದೆ.

ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ಲಭ್ಯವಾಗುವಂತೆ ಕೋರಿ ಹಣಕಾಸು ಇಲಾಖೆಗೆ ಪತ್ರ ಕಳುಹಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!