Sunday, August 14, 2022

Latest Posts

ಕೃಷಿ ಕಾನೂನು ವಿರೋಧಿಸಿ ಮಾರ್ಚ್ 26 ರಂದು ‘ಭಾರತ್ ಬಂದ್’ ಗೆ ಕರೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಿರೋಧಿಸಿ ಕಳೆದ 4 ತಿಂಗಳಿಂದ ಹೋರಾಟ ಕೈಗೊಂಡಿರುವ ರೈತರು ಮಾರ್ಚ್ 26 ರಂದು ರಾಷ್ಟ್ರವ್ಯಾಪಿ ಸಂಪೂರ್ಣ ಬಂದ್ ಗೆ ಕರೆ ನೀಡಿದ್ದಾರೆ.
ತಮ್ಮ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಿದ ರೈತ ಸಂಘಟನೆಗಳು ಭಾರತ್ ಬಂದ್ ಗೆ ನಿರ್ಧರಿಸಿದೆ ಎನ್ನಲಾಗಿದೆ. ಜೊತೆಗೆ ಮಾರ್ಚ್ 15 ರಂದು ಇಂಧನ ಬೆಲೆ ಏರಿಕೆ ರೈತರು ಪ್ರತಿಭಟನೆ ನಡೆಸಲಿದ್ದು, ಇದಕ್ಕೆ ಕಾರ್ಮಿಕ ಸಂಘಟನೆಗಳು ಕೂಡ ಬೆಂಬಲ ನೀಡಲಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಮಾರ್ಚ್ 26 ರಂದು ಹೋರಾಟಕ್ಕೆ ನಾಲ್ಕು ತಿಂಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss