Saturday, June 10, 2023

Latest Posts

ಹಿರೇಕೆರೂರ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್

ಹೊಸದಿಗಂತ ವರದಿ, ಹಾವೇರಿ:

ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೬೦ ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಇಲಾಖೆಯ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು.
ಸೋಮವಾರ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೬೦ ವರ್ಷ ಮೇಲ್ಪಟ್ಟ ಹಿನ್ನಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಆರೋಗ್ಯ ಇಲಾಖೆ ಕಾರ್ಯಕರ್ತೆಯರಿಂದ ಬೂಸ್ಟರ್ ಡೋಸ್ ಲಸಿಕೆ ಪಡೆದರು.
ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು ೬೦ ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಕೊಮೊರ್ಬಿಡ್ ಜನರಿಗೆ ಕೊರೋನಾ ವೈರಸ್ ವಿರುದ್ಧ ಮುನ್ನೆಚ್ಚರಿಕಾ ಡೋಸ್‌ನ್ನು ಇಂದಿನಿಂದ ನೀಡಲಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ. ಈ ಹಿಂದೆ ಮೊದಲ ಹಾಗೂ ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಎಲ್ಲರೂ ತಪ್ಪದೇ ಲಸಿಕಾಕರಣ ಹಾಕಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.
ಈ ಹಿಂದೆ ಮೊದಲ, ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ ೨ ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್‌ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ. ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, ೬೦ ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯು ಓಮೆಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇಕಡಾ ೮೮ ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!