ಎಂಸಿಡಿ ಚುನಾವಣೆಗೂ ಮುನ್ನ11 ಬಂಡಾಯ ಅಭ್ಯರ್ಥಿಗಳನ್ನು ಅಮಾನತು ಮಾಡಿದ ಬಿಜೆಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ) ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿರುವ 11 ಮಂದಿ ಬಂಡಾಯ ಅಭ್ಯರ್ಥಿಗಳನ್ನು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಆರು ವರ್ಷಗಳ ಕಾಲ ಅಮಾನತು ಮಾಡಿ ಆದೇಶ ಹೊರಡಿಸಿದರು.

ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿರುವ 11 ಬಿಜೆಪಿ ಕಾರ್ಯಕರ್ತರ ಪ್ರಾಥಮಿಕ ಸದಸ್ಯತ್ವವನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡಿರುವ ಬಿಜೆಪಿ ಬಂಡಾಯಗಾರರಲ್ಲಿ ಗಜೇಂದ್ರ ದಾರಾಲ್ ಅವರನ್ನು ಆರಂಭದಲ್ಲಿ ಮುಂಡ್ಕಾ ವಾರ್ಡ್‌ನಿಂದ ಪಕ್ಷದ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಇದೀಗ ಅವರ ಬದಲಿಗೆ ಹೊಸ ಅಭ್ಯರ್ಥಿ ಅರುಣ್ ದಾರಾಲ್ ಅವರನ್ನು ನೇಮಿಸಲಾಗಿದೆ. ಹಿರಿಯ ನಾಯಕರ ಪ್ರಯತ್ನಗಳ ಹೊರತಾಗಿಯೂ ಗಜೇಂದ್ರ ದಾರಾಲ್ ಅವರು ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳದ ಪರಿಣಾಮವಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಯ 250 ವಾರ್ಡ್‌ಗಳಿಗೆ ಡಿಸೆಂಬರ್ 4 ರಂದು ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!