ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್‌ನ ಮೇಘನಿ ನಗರದಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ ಮೂರು ದಿನಗಳ ನಂತರ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಪತ್ತೆಯಾದ ಮೃತದೇಹದೊಂದಿಗೆ ಡಿಎನ್‌ಎ ಮ್ಯಾಚ್ ಆಗಿದ್ದು, ಮೃತದೇಹ ಹಸ್ತಾಂತರಕ್ಕೆ ತಯಾರಿ ನಡೆದಿದೆ.
ಈ ಕುರಿತು ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ 11:10ಕ್ಕೆ ಬಂದ ಡಿಎನ್‌ಎ ವರದಿಯಲ್ಲಿ ರೂಪಾನಿ ಅವರ ಡಿಎನ್‌ಎಗೆ ಮ್ಯಾಚ್ ಆಗಿದೆ ಎಂದು ತಿಳಿಸಿದ್ದಾರೆ.
ರೂಪಾನಿ ಅವರ ಸಹೋದರಿಯಿಂದ ಸ್ಯಾಂಪಲ್ ಪಡೆದು ಡಿಎನ್‌ಎ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆ ವೇಳೆ ಡಿಎನ್‌ಎ ಮಾಚ್ ಆಗಿದ್ದು ಮೂರು ದಿನಗಳ ಬಳಿಕ ಮೃತದೇಹದ ಗುರುತು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರದಲ್ಲೇ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.